Share this news

ನವದೆಹಲಿ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ  ಬಂಧಿತರಾಗಿ ಜಾಮೀನಿನ ಮೇಲೆ ಆಚೆ ಬಂದಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್​  ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಒಂದು ವಾರದಲ್ಲಿ ಕೋರ್ಟ್ ಮುಂದೆ ಶರಣಾಗಲು ಆದೇಶದಲ್ಲಿ ಸೂಚಿಸಿದೆ. ಈ ಮೂಲಕ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಭೀತಿ ಶುರುವಾಗಿದೆ.

ವಿನಯ್ ಕುಲಕರ್ಣಿ ಜಾಮೀನು ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್​, ಶುಕ್ರವಾರ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಒಂದು ವಾರದಲ್ಲಿ ಕೋರ್ಟ್ ಮುಂದೆ ಶರಣಾಗಲು ಕಾಂಗ್ರೆಸ್ ಶಾಸಕನಿಗೆ ಸೂಚಿಸಿದೆ. ಈ ಮೂಲಕ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಪಾಲಾಗುವ ಸಾಧ್ಯತೆ ಇದೆ

ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿರುವ ತಮ್ಮ ಒಡೆತನದ ಜಿಮ್​ನಲ್ಲಿಯೇ ಜೂನ್ 15, 2016ರಲ್ಲಿ ಯೋಗೇಶ್​ ಗೌಡ ಅವರ ಕೊಲೆ ನಡೆದಿತ್ತು.  ಆಗ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು. ಪ್ರಕರಣ ಸಂಬಂಧ ನವೆಂಬರ್ 5, 2020ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. 

 

 

 

 

 

Leave a Reply

Your email address will not be published. Required fields are marked *