Share this news

 

ನವದೆಹಲಿ: ಗುಜರಾತ್​​ನ ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ   ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಪೈಕಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್​​ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂದು ತಿಳಿದು ಬಂದಿದೆ.

ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಅಪಘಾತದಲ್ಲಿ ಬದುಕುಳಿದರು.

ಏತನ್ಮಧ್ಯೆ, ವಿಮಾನ ಪತನದ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ತ್ವರಿತಗತಿಯಲ್ಲಿ ಸಾಗುತ್ತಿದೆ. ತನಿಖೆಯಲ್ಲಿ ಮಹತ್ವದ ಪಾತ್ರವಹಿಸಲಿರುವ ನಿರ್ಣಾಯಕ ಸಾಧನವಾಗಿದ್ದ ಒಂದು ಬ್ಲ್ಯಾಕ್ ಬಾಕ್ಸ್​​ ಅನ್ನು ಗುರುವಾರ ರಾತ್ರಿ ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಎರಡನೇ ಬ್ಲ್ಯಾಕ್ ಬಾಕ್ಸ್​​ ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್​​ಗಾಗಿ (ಡಿವಿಆರ್) ಶೋಧ ಕಾರ್ಯ ಮುಂದುವರೆದಿದ್ದು, ಇವುಗಳು ಪ್ರಮುಖ ಸುಳಿವುಗಳನ್ನು ನೀಡಲಿವೆ.

 

 

 

 

 

 

 

Leave a Reply

Your email address will not be published. Required fields are marked *