Share this news

 

ಕಾರ್ಕಳ: ಶಾಸಕರು ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಜೂ.16 ರಂದು ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ, ತಹಶೀಲ್ದಾರ್ ಮತ್ತು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪಾಲಿಟೆಕ್ನಿಕ್ ಕ್ಯಾಂಪಸ್ ನಲ್ಲಿ ರೈಟ್ಸ್ ಮೂಲಕ ನೂತನವಾಗಿ ನಿರ್ಮಾಣಗೊಂಡ 01 ಕೋಟಿ ವೆಚ್ಚದ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕರು ಬಳಿಕ ಸುಮಾರು 3.97ಕೋಟಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿ ಮೂಲಕ ನಿರ್ಮಿಸುತ್ತಿರುವ ಪಾಲಿಟೆಕ್ನಿಕ್ ಕಟ್ಟಡ ವೀಕ್ಷಿಸಿ ಅಧಿಕಾರಿಗಳಿಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಿದರು. ಮಳೆಗಾಲದ ಪ್ರಾಕೃತಿಕ ವಿಕೋಪ ಮುನ್ನೆಚ್ಚರಿಕೆಗಾಗಿ ಪಾಲಿಟೆಕ್ನಿಕ್ ವಠಾರದಲ್ಲಿ ಮಳೆ ನೀರು ಹರಿದು ಹೋಗಲು ಒಳಚರಂಡಿ ವ್ಯವಸ್ಥೆ ಹಾಗೂ ಹೈ ವೋಲ್ಟೇಜ್ ವಿದ್ಯುತ್ ಪರಿವರ್ತಕ ಮತ್ತು ಜನರೇಟರ್ ಗಳಿಗೆ ಪ್ರತ್ಯೇಕ ಮಾಡಿನ ವ್ಯವಸ್ಥೆ ಕಲ್ಪಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರ ಪ್ರದೇಶಾಭಿವೃಧ್ಧಿ ಯೋಜನೆಯಡಿ ಪಾಲಿಟೆಕ್ನಿಕ್ ಕ್ಯಾಂಪಸ್ಸಿನಲ್ಲಿ 10 ಲಕ್ಷ ವೆಚ್ಚದಲ್ಲಿ ನಿರ್ಮಿಸ ಲಾಗುತ್ತಿರುವ ಬಾಲಕರ ಶೌಚಾಲಯ ಕಾಮಗಾರಿ ವೀಕ್ಷಿಸಿ ಕ್ಯಾಂಪಸ್ಸಿನಲ್ಲಿ ಕಾರ್ಯಾಚರಿಸುತ್ತಿರುವ ತಮ್ಮ ಮಹತ್ವಾಕಾಂಕ್ಷೆಯ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟ್ಯೂಟ್ (ಕೆಜಿಟಿಟಿಐ) ಕಾರ್ಯಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ
ಮಾಹಿತಿ ಪಡೆದರು. ಬಳಿಕ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆದ್ಯತೆಯ ಅನುಸಾರ ತ್ವರಿತವಾಗಿ ಪೂರ್ಣಗೊಳಿಸುವ ಕಾಮಗಾರಿಗಳು ಮತ್ತು ಹೆಚ್ಚುವರಿ ಅನುದಾನ ಪಡೆದು ಶೀಘ್ರ ಪೂರೈಸುವ ಕಾಮಗಾರಿಗಳ ಪಟ್ಟಿ ತಯಾರಿಸಿ, ತ್ವರಿತ ವಿಲೇವಾರಿಗಾಗಿ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 

 

 

 

 

 

 

 

Leave a Reply

Your email address will not be published. Required fields are marked *