ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ವಿಭಾಗೀಯ ಪೀಠ ಆರ್‌ಸಿಬಿ , ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ವಿಭಾಗೀಯ ಪೀಠ ಇಂದು (ಜೂ.17) ನಡೆಸಿತು.
ರಾಜ್ಯ ಸರ್ಕಾರ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಕೆ ಮಾಡಿತು. ವಿಚಾರಣೆಯ ಆರಂಭದ ವೇಳೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಕೆ ಏಕೆ ಎಂದು ಹೈಕೋರ್ಟ್ ಪ್ರಶ್ನಿಸಿತು. ಮೂರನೇ ವ್ಯಕ್ತಿಗಳ ವಿರುದ್ಧ ಅಭಿಪ್ರಾಯವೆಂದು ಭಾವಿಸಬಾರದು ಹಾಗಾಗಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ ಎಂದು ಹೈಕೋರ್ಟಿಗೆ ಸರ್ಕಾರದ ಪರವಾಗಿ ಎಜಿ ಶಶಿಕಿರಣಶೆಟ್ಟಿ ಉತ್ತರಿಸಿದರು. ದಾಖಲೆಗಳನ್ನು ಹಂಚಿಕೊಳ್ಳುವುದಕ್ಕೆ ಸರ್ಕಾರದ ಆಕ್ಷೇಪವಿಲ್ಲ. ಆದರೆ ನ್ಯಾಯಾಂಗ ತನಿಖೆ ಬಾಕಿ ಇರುವುದರಿಂದ ವರದಿ ಬಹಿರಂಗ ಅಗಿದು ಬೇಡ ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಈ ಪ್ರಕರಣದಲ್ಲಿ ಅಮೈಕಸ್ ಕ್ಯೂರಿ ಅಗತ್ಯವಿದೆ ಎಂದು ಇದೇ ವೇಳೆ ಹೈಕೋರ್ಟ್ ತಿಳಿಸಿತು.
ಸರ್ಕಾರದ ವರದಿ ಬಹಿರಂಗಗೊಳಿಸಲು ಕೆಲ ಅರ್ಜಿದಾರರಿಂದ ಮನವಿ ಸಲ್ಲಿಸಲಾಗಿದೆ. ಸರ್ಕಾರ ಪಾರದರ್ಶಕ ಮತ್ತು ಪ್ರಜಾಪ್ರತಾತ್ಮಕ ಪ್ರಕ್ರಿಯೆ ಅನುಸರಿಸಬೇಕು. ಮಾಹಿತಿ ಹಕ್ಕನ್ನು ಸರ್ಕಾರ ಗೌರವಿಸಬೇಕು ಸರ್ಕಾರ ಯಾವುದೇ ಮಾಹಿತಿಯನ್ನು ಮುಚ್ಚಿಡಬಾರದು. ಸರ್ಕಾರ ಸಂಪೂರ್ಣ ತಪ್ಪು ವರದಿ ನೀಡಿದರು ತಿಳಿಯುವುದಿಲ್ಲ ಎಂದು ವಾದಿಸಲಾಯಿತು.