ಬೆಂಗಳೂರು : ತಾನು ಮಾಜಿ ಸಂಸದ ಡಿ.ಕೆ ಸುರೇಶ್ ಸಹೋದರಿ ಎಂದು ಕೋಟ್ಯಾಂತರ ರೂಪಾಯಿ ಚೆನ್ನಾಭರಣ ವಂಚನೆ ಪ್ರಕರಣದಲ್ಲಿ ಬಂಧಿತಳಾಗಿ ಜೈಲು ಸೇರಿದ್ದ ಐಶ್ವರ್ಯ ಗೌಡಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣದ ಸಂಬAಧ ಜಾರಿ ನಿರ್ದೇಶನಾಲಯ ಡಿಕೆ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು.
ಈ ಹಿನ್ನಲೆಯಲ್ಲಿ ಇಂದು ಡಿಕೆ ಸುರೇಶ್ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.ಕಳೆದ ಜೂನ್ 19ರಂದೆ ಡಿಕೆ ಸುರೇಶ್ ವಿಚಾರಣೆಗೆ ಹಾಜರಾಗಬೇಕಿತ್ತು, ಆದರೆ ಕಾರಣಾಂತರಗಳಿAದ ಹಾಜರಾಗಿಲ್ಲ. ಹಾಗಾಗಿ ಇಂದು ಬೆಂಗಳೂರಿನಲ್ಲಿ ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.