

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಸತಿ ನಿಲಯದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ಅಮೃತಭಾರತಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್ ಮಾತನಾಡಿ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಅತಿಹೆಚ್ಚು ಓದುವ ಅವಕಾಶವಿದೆ. ಸಮಯವನ್ನು ಸದ್ಬಳಕೆ ಮಾಡಿಕೊಂಡು ತಂದೆ – ತಾಯಿ ಹಾಗೂ ಸಂಸ್ಥೆಯನ್ನು ಸಮಾಜದಲ್ಲಿ ಗುರುತಿಸುವಂತೆ ಮಾಡಬೇಕು ಎಂದು ಕಿವಿಮಾತು ಹೇಳಿದರು. ಸಮಾಜದ ಮಾದರಿ ವ್ಯಕ್ತಿಯಾಗಿ ರಾಷ್ಟ್ರ ಸೇವೆಗೆ ಅಣಿಯಾಗಬೇಕೆಂದು ಆಶಿಸಿದರು.
ಈ ಸಂದರ್ಭದಲ್ಲಿ ವಸತಿ ನಿಲಯದ ಸದಸ್ಯ ರಾಮಕೃಷ್ಣ ಆಚಾರ್ಯ, ಸಂಸ್ಥೆಯ ಮುಖ್ಯಶಿಕ್ಷಕಿ ಅಪರ್ಣಾ ಆಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಸತಿ ನಿಲಯದ ಮುಖ್ಯಸ್ಥ ನಿತಿನ್ ಶೆಟ್ಟಿ, ವಸತಿ ನಿಲಯದ ಮೇಲ್ವಿಚಾರಕರಾದ ವಿರೂಪಾಕ್ಷ , ಅಂಜಲಿ ಹಾಗೂ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ನವ್ಯಾ ಪೈ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.







