ಬೆಂಗಳೂರು: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ IAS ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿ,ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣೆ ಹೊಣೆಗಾರಿಕೆ ವಹಿಸಲಿದ್ದಾರೆ.
ರೋಹಿಣಿ ಸಿಂಧೂರಿ ಸರ್ಕಾರದ ಹಲವು ಇಲಾಖೆಗಳಲ್ಲಿ ಜವಾಬ್ದಾರಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ.