Share this news

ಕಾರ್ಕಳ : ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಎಂದು ಕೀಳರಿಮೆ ಇರಬಾರದು. ಪ್ರತಿಭೆಗಳಿರುವುದು ಹಳ್ಳಿಗಳಲ್ಲಿಯೇ. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಲು ಸಮಾಜದಲ್ಲಿ ಸವಾಲನ್ನು ಎದುರಿಸಲು ಸಮರ್ಥರಾಗಿರುತ್ತಾರೆ. ಮಕ್ಕಳ ಭವಿಷ್ಯದ ಬಗ್ಗೆ ಸದಾ ಚಿಂತಿಸುತ್ತಿರುವ, ಶ್ರಮಪಡುತ್ತಿರುವ ಹೆತ್ತವರನ್ನು ಎಂದೂ ನಿರಾಶೆಗೊಳಿಸದಿರಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

ಅವರು ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿದ್ದ ನೆಲ್ಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮೊಕ್ತೇಸರರಾದ ಸುನಿಲ್ ಕೆ ಆರ್. ಮಾತನಾಡಿ, ರಾಷ್ಟ್ರೀಯತೆ ಮತ್ತು ಸಂಸ್ಕಾರವನ್ನು ಮೂಡಿಸುವ ಶಿಕ್ಷಣ ಅಗತ್ಯವಾಗಿದೆ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅವಿನಾಶ್ ಎ ಶೆಟ್ಟಿ, ಕಾರ್ಕಳ ತಾಲೂಕು ಆರೋಗ್ಯ ಅಧಿಕಾರಿ ಡಾ.ಸಂದೀಪ್ ಕುಡ್ವ, ನ್ಯಾಯವಾದಿ ನಂದಿನಿ ಶೆಟ್ಟಿ ಉಪಸ್ಥಿತರಿದ್ದರು.

ಗೈಡ್ಸ್ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ನಿವೃತ್ತ ಮುಖ್ಯ ಶಿಕ್ಷಕರಾದ ವಸಂತ್ ಎಂ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪನ್ಯಾಸಕ ಜಗದೀಶ್ ಕಾರ್ಯಕ್ರಮ ನಿರೂಪಿಸಿ, ಪ್ರಾಂಶುಪಾಲೆ ಸುಚೇತಾ ಕಾಮತ್ ವಂದಿಸಿದರು.

 

Leave a Reply

Your email address will not be published. Required fields are marked *