ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ವತಿಯಿಂದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಆಯೋಜಿಸಿದ ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ ನಡೆಯಿತು.
ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ವಿಭಾಗ)ಯ ಉಪನಿರ್ದೇಶಕರಾದ ಮಾರುತಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿಯ ಭೌತಶಾಸ್ತ್ರ ದ ಸ್ನಾತಕೋತ್ತರ ಹಾಗೂ ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಡಾ.ರಾಘವೇಂದ್ರ ಎಸ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾಗಿ ಇಲ್ಲಿಯವರೆಗೆ ಸೇವೆ ಸಲ್ಲಿಸಿದ ಗಣಪತಿ ಅವಭೃತ ಹಾಗೂ ಇತ್ತೀಚೆಗಷ್ಟೆ ನಿಟ್ಟೆ ಎನ್.ಎಸ್.ಎ.ಎಮ್. ಪ.ಪೂ. ಕಾಲೇಜಿನ ಪ್ರಾಂಶುಪಾಲರಾಗಿ ಹಾಗೂ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ. ಪ್ರಕಾಶ್ ಶೆಣೈ ಅವರನ್ನು ಸನ್ಮಾನಿಸಲಾಯಿತು.
ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಕಾರ್ಯದರ್ಶಿ ಉಮಾಪತಿ ಸ್ವಾಗತಿಸಿ, ಖಜಾಂಚಿ ಸದಾನಂದ ಕುಲಾಲ್ ವಂದಿಸಿದರು. ಮಣಿಪಾಲ ಜ್ಞಾನಸುಧಾ ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.