ಕಾರ್ಕಳ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಮಂಗಳವಾರ ಮುಂಜಾನೆ ಕಾರ್ಕಳ ತಾಲೂಕಿನ ಬೆಳ್ಮಣ್ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ತಮ್ಮ ಕುಟುಂಬದ ಜೊತೆ ಆಗಮಿಸಿದ ಪರಮೇಶ್ವರ್ ಅವರನ್ನು ದೇವಸ್ಥಾನದ ಅರ್ಚಕರು ಬರ ಮಾಡಿಕೊಂಡರು. ದೇವರ ದರ್ಶನ ಪಡೆದು ಬಳಿಕ ಚಂಡಿಕಾ ಹೋಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಪಡೆದರು.
ಗೃಹ ಸಚಿವರ ಖಾಸಗಿ ಭೇಟಿಯಾಗಿದ್ದು,ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಕೊಡವೂರು ಮುಂತಾದವರು ಉಪಸ್ಥಿತರಿದ್ದರು.