

ಮಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಶೀಘ್ರವೇ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಅವರು ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಶೀಘ್ರವೇ 402 ಪಿಎಸ್ಐ ಹಾಗೂ 10 ರಿಂದ 15 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ.
ಮಂಗಳೂರಿನ ಎಸ್ ಪಿ ಕಚೇರಿ ಪುತ್ತೂರಿಗೆ ವರ್ಗಾಯಿಸಬೇಕೆಂಬ ಬೇಡಿಕೆಯಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು



