ಬೆಂಗಳೂರು: ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಸ್ಕೂಲ್(KPS) ವಿದ್ಯಾರ್ಥಿಗಳಿಗೆ LKG ಯಿಂದ ಪಿಯುಸಿ ವರೆಗೆ ಸರ್ಕಾರದಿಂದಲೇ ಉಚಿತ ಬಸ್ ಸೌಲಭ್ಯವನ್ನು ಘೋಷಿಸಲಾಗಿದೆ.
ಕೆಪಿಎಸ್ ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ (LKG) ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗುವುದೆಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.