ಕಾರ್ಕಳ: ಸರ್ಕಾರಕ್ಕೆ ರಾಜಧನ ಪಾವತಿಸದೇ ಕುಕ್ಕುಂದೂರು ಗ್ರಾಮದ ನಕ್ರೆ ಪೊಸನೊಟ್ಟು ಸರ್ವೇ ನಂಬ್ರ 557/2 ರಲ್ಲಿನ ಪಾದೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಕುರಿತು ಮಾಹಿತಿ ಪಡೆದುಕೊಂಡ ಕಾರ್ಕಳ ನಗರ ಠಾಣೆಯ ಎಸ್ಐ ಶಿವಕುಮಾರ್ ಎಸ್ಆರ್, ಸಿಬ್ಬಂದಿಗಳಾದ ಸದಾಶಿವ ಶೆಟ್ಟಿ, ಸಂತೋಷ, ಶಿವರಾಜ ನೇತೃತ್ವದ ಪೊಲೀಸರ ಶುಕ್ರವಾರ ಬೆಳಗ್ಗೆ ದಾಳಿ ನಡೆಸಿ ಕಲ್ಲು ಸಾಗಾಟಕ್ಕೆ ಬಳಸುತ್ತಿದ್ದ ಟಿಪ್ಪರ್ ಲಾರಿ ವಶಪಡಿಸಿಕೊಂಡಿದ್ದಾರೆ.
ಸುಧಾಕರ ಎಂಬವರು ಕಂದಾಯ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಯಾವುದೇ ಪರವಾನಗಿ ಪಡೆಯದೇ ರಾಜಾರೋಷವಾಗಿ ಸೈಜ್ ಕಲ್ಲುಗಳನ್ನು ಮಾರಾಟ ಮಾಡುತ್ತಿದ್ದು ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂ ರಾಜಧನ ನಷ್ಟ ಸಂಭವಿಸಿದೆ ಎನ್ನುವ ಮಾಹಿತಿ ಲಭಿಸಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ