Share this news

ಕಾರ್ಕಳ : ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ ಜುಲೈ 11 ರಂದು 6/8 ಕರ್ನಾಟಕ ಎನ್‌.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು.

6 ಕರ್ನಾಟಕ ಎನ್‌.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಘಟಕ ಉದ್ಘಾಟಿಸಿ ಮಾತನಾಡಿ, ಎನ್.ಸಿ.ಸಿ ಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಮಾತನಾಡಿ, ಎನ್‌.ಸಿ.ಸಿ ಯ ಶಿಸ್ತು, ಸಮಯ ಪಾಲನೆ, ನಾಯಕತ್ವ ಹಾಗೂ ದೇಶಪ್ರೇಮದ ಕುರಿತು ಉಲ್ಲೇಖಿಸಿ, “ಯುವಜನತೆ ರಾಷ್ಟ್ರದ ಭವಿಷ್ಯ, ಅವರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ದೇಶ ಪ್ರಗತಿಯ ಮಾರ್ಗದಲ್ಲಿ ಸಾಗುತ್ತದೆ” ಎಂದರು.

ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಎಂ.ಎ ಮುಲ್ತಾನಿ, ಪಿ.ಐ ಸ್ಟಾಫ್ ವರ್ಗದವರು, ಕಾಲೇಜು ಎನ್.ಸಿ.ಸಿ ನೌಕಾ ಘಟಕದ ಸಿ.ಟಿ.ಒ ಆಗಿರುವ ಆಂಗ್ಲ ಭಾಷಾ ಉಪನ್ಯಾಸಕ ಮಹೇಶ್ ಆರ್. ಶೆಣೈ ಕೆ. ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಸುದೀಕ್ಷಾ ಎಸ್. ಪೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *