

ಕಾರ್ಕಳ: ಪುರಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳು ಮಳೆಯಿಂದ ಸಂಪೂರ್ಣ ಹದಗೆಟ್ಟಿದ್ದು ರಸ್ತೆಗಳ ಅಭಿವೃದ್ಧಿಗೆ 10 ಕೋ.ರೂ ವಿಶೇಷ ಅನುದಾನ ಒದಗಿಸುವಂತೆ ಕೋರಿ ಪುರಸಭೆ ವತಿಯಿಂದ ಕ್ರಿಯಾ ಯೋಜನೆ ಸಿದ್ದಪಡಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಲಾಗಿದೆ.
ಪುರಸಭೆ ವ್ಯಾಪ್ತಿಯ ಬಹುತೇಕ ಮುಖ್ಯ ರಸ್ತೆಗಳು ಭಾರೀ ಮಳೆಯಿಂದಾಗಿ ಹದಗೆಟ್ಟಿದ್ದು ಇದರಿಂದ ವಾಹನಗಳ ಸಂಚಾರಕ್ಕೆ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ.ಮಾತ್ರವಲ್ಲದೇ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಹಿನ್ನಡೆಯಾಗಿದೆ. ಕಳೆದ 2019-20ರಲ್ಲಿ ವಿಶೇಷ ಅನುದಾನ ಬಿಡುಗಡೆಯಾಗಿತ್ತು.ಇದೀಗ 5 ವರ್ಷದಿಂದ ಅಭಿವೃದ್ಧಿ ಕೆಲಸಗಳಿಗೆ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ ಆದ್ದರಿಂದ ತಕ್ಷಣವೇ 10 ಕೋ.ರೂ ವಿಶೇಷ ಅನುದಾನ ಬಿಡುಗಡೆಗೊಳಿಸುವಂತೆ ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷ ಪ್ರಶಾಂತ ಕೋಟ್ಯಾನ್ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.


