ಕಾರ್ಕಳ: ತೀವ್ರ ಎದೆನೋವು ಕಾಣಿಸಿಕೊಂಡ ಮಹಿಳೆಯೊಬ್ಬರು ಮನೆಯಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಅಜೆಕಾರಿನಲ್ಲಿ ಸಂಭವಿಸಿದೆ.
ಅಜೆಕಾರು ಕೊಂಬಗುಡ್ಡೆ ನಿವಾಸಿ ಸುರೇಶ್ ಎಂಬವರ ಪತ್ನಿ ಮೈನಾ( 34 ವರ್ಷ)ಎಂಬವರು ಮೃತಪಟ್ಟ ಮಹಿಳೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮೈನಾ ಅವರಿಗೆ ಭಾನುವಾರ ರಾತ್ರಿ 8 ಗಂಟೆಗೆ ಎದೆನೋವು ಕಾಣಿಸಿಕೊಂಡಿದ್ದರೂ ಅವರ ಪತಿ ಸುರೇಶ್ ಆಸ್ಪತ್ರೆಗೆ ಕರೆದುಕೊಂಡು ಹೋಗದೇ ನಿರ್ಲಕ್ಷ್ಯವಹಿಸಿದ ಪರಿಣಾಮ ಆಕೆ ಸೋಮವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ