ಕಾರ್ಕಳ: ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ. ಕೆ. ವಾಸುದೇವ್ ರವರು ಅನಾರೋಗ್ಯದಿಂದ ನಿಧನರಾಗಿದ್ದು,ಅವರ ಅಗಲಿಕೆಗೆ ಕರ್ನಾಟಕ ರಾಜ್ಯ ಫೆಡರೇಷನ್ ಆಫ್ ಕರ್ನಾಟಕ, ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ (ರಿ.) ಬೆಂಗಳೂರು ಇದರ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಸಂತಾಪ ಸೂಚಿಸಿದ್ದಾರೆ.
ಸಂಘದ ಹಿರಿಯ ಸ್ವಯಂಸೇವಕ, ಚಿಕ್ಕಮಗಳೂರು ರಾಷ್ಟೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಕಾರ್ಯವಾಹಕರಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದ ಎಂ.ಕೆ ವಾಸುದೇವ್ ಎಲ್ಲರ ಪ್ರೀತಿಯ “ವಾಸು ಮಾಷ್ಟ್ರು” ಎಂದೇ ಖ್ಯಾತರಾಗಿದ್ದರು.
ಅಗಲಿದ ಅವರ ಆತ್ಮಕ್ಕೆ ಭಗವಂತ ಮೋಕ್ಷವನ್ನು ಕರುಣಿಸಲಿ ಮತ್ತು ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬವರ್ಗ, ಶಿಷ್ಯವರ್ಗ ಹಾಗೂ ಆತ್ಮೀಯರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.