ಕಾರ್ಕಳ :ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು (ನಾಳೆ) ಜುಲೈ 26ರ ಶನಿವಾರದಂದು ಆಯೋಜಿಸಲಾಗಿದೆ. ಕಾರ್ಗಿಲ್ ವಿಜಯ ದಿವಸದ ಶುಭ ಸಂದರ್ಭದಲಿ ್ಲ ಇದನ್ನು ಆಯೋಜಿಸಲಾಗಿದ್ದು, ಅಂದು ಅಪರಾಹ್ನ 3.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ “ಬಹುರತ್ನ ಪ್ರಸವೀ ಭಾರತೀ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸಬಹುದೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.v