Share this news

ಕಲಬುರಗಿ: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಗ್ಯಾರಂಟಿಗಳಿಗೆ ಬಳಕೆಯಾಗಿದ್ದರೆ ಬಿಜೆಪಿ ಸಮರ್ಪಕ ದಾಖಲೆ ನೀಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಒಂದುವೇಳೆ ಎಸ್‌ಸಿ ಎಸ್‌ಟಿ ಅನುದಾನ ದುರ್ಬಳಕೆ ಆಗಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಸುಮ್ಮನೆ ಆರೋಪ ಮಾಡುವುದು ಬಿಟ್ಟು ಜನರಿಗೆ ದಾರಿ ತಪ್ಪಿಸುವುದನ್ನು ಬಿಟ್ಟು ಸರ್ಕಾರಕ್ಕೆ ದಾಖಲೆ ಒದಗಿಸಲಿ. ಬಿಜೆಪಿ ಕಾಲದಲ್ಲಿ ಎಸ್‌ಸಿ ಎಸ್‌ಪಿ/ ಟಿಎಸ್‌ಪಿ ಅನುದಾನ ಬೇರೆ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲಾಗಿತ್ತು. ಅದನ್ನು ಅಂದಿನ ಸಿಎಂ ಬೊಮ್ಮಾಯಿ ಒಪ್ಪಿಕೊಂಡಿದ್ದರು. ಈಗ ಅದೇ ಬಿಜೆಪಿ ನಾಯಕರು ತಪ್ಪು ಮಾಹಿತಿ ಕೊಡುತ್ತಿದ್ದಾರೆ. ಬಿಜೆಪಿಯವರ ಆರೋಪಗಳಿಗೆ ಸದನದಲ್ಲೇ ಉತ್ತರ ನೀಡಲಾಗಿದೆ ಎಂದರು.

ದಲಿತರ ಬಗ್ಗೆ ಕಾಳಜಿ ಇದ್ದರೆ ಕೇಂದ್ರದಿAದ ಅನುದಾನ ತರಲಿ

ದಲಿತರ ಹಾಗೂ ಆದಿವಾಸಿಗಳ ಬಗ್ಗೆ ಬಿಜೆಪಿ ನಾಯಕರಿಗೆ ನಿಜವಾದ ಕಾಳಜಿಯಿದ್ದರೆ ಕೇಂದ್ರದಿAದ ಅನುದಾನ ತರಿಸಿಕೊಡಲಿ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯದಲ್ಲಾದರೂ ಅನುದಾನ ಒದಗಿಸಲಿ ಎಂದು ಸವಾಲು ಹಾಕಿದರು.ವಿರೋಧ ಪಕ್ಷದ ಶಾಸಕರಿಗೆ ಅನುದಾನ ಕೊರತೆಯಾಗಿದೆ ಎನ್ನುವ ಆರೋಪಕ್ಕೆ ಉತ್ತರಿಸಿದ ಸಚಿವರು, ಎಲ್ಲಾ ಶಾಸಕರು ತಮ್ಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನಿರೀಕ್ಷೆ ಮಾಡುವುದು ತಪ್ಪಲ್ಲ. ಅಂದು ಬಿಜೆಪಿ ಸರ್ಕಾರ ಇದ್ದಾಗಲೂ ಕೂಡಾ ನಮಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಎಸಗಲಾಗಿತ್ತು. ಈ ಬಗ್ಗೆ ನಾನು ಹಲವಾರು ಬಾರಿ ಹೇಳಿದ್ದೇನೆ ಎಂದರು.

 

 

 

 

Leave a Reply

Your email address will not be published. Required fields are marked *