ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಭಾರತೀಯ ಚುನಾವಣಾ ಆಯೋಗ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ಆರೋಪ ಆಧಾರರಹಿತ ಮತ್ತು ಬೇಜವಾಬ್ದಾರಿತನದ್ದಾಗಿದೆ ಎಂದು ತೀಕ್ಷ÷್ಣವಾಗಿ ಪ್ರತಿಕ್ರಿಯಿಸಿದೆ.
ರಾಹುಲ್ ಆರೋಪದ ಕುರಿತಂತೆ ಶುಕ್ರವಾರ ಚುನಾವಣಾ ಆಯೋಗವು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ರಾಹುಲ್ ಗಾಂಧಿಯವರು ಪ್ರತಿದಿನ ಮಾಡುತ್ತಿರುವ ಇಂತಹ ಆಧಾರರಹಿತ ಆರೋಪಗಳನ್ನು ಚುನಾವಣಾ ಆಯೋಗ ನಿರ್ಲಕ್ಷಿಸುತ್ತದೆ, ಚುನಾವಣಾ ಆಯೋಗದಲ್ಲಿ ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಚುನಾವಣಾ ಅಧಿಕಾರಿಗಳಿಗೆ ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಮಹತ್ವ ನೀಡಬೇಡಿ ಎಂದು ಆಯೋಗ ಸೂಚಿಸಿದೆ.