ಕಾರ್ಕಳ ಆ.02; ಬಿಂಬ ಪ್ರಕಾಶನ ಸಮೂಹ ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥ ವಸಂತ್ ಕುಮಾರ್ ಅವರಿಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ (ರಿ) ಬೆಂಗಳೂರು ಇದರ ವತಿಯಿಂದ ಸಾಹಿತಿ ಡಿ. ವಿ ಜಿಯವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.
ತುಮಕೂರು ನೊಣವಿನ ಕೆರೆ ಶ್ರೀ ಕಾಡು ಸಿದ್ದೇಶ್ವರ ಸಂಸ್ಥಾನ ಮಠದ ಶ್ರೀ ಡಾ. ಕರಿವೃಷಭ ದೇಶಿ ಕೇಂದ್ರ ಶಿವ ಯೋಗೀಶ್ವರ ಮಹಾಸ್ವಾಮಿಗಳು, ಹೊರನಾಡು ಅನ್ನ ಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿ ಭೀಮೇಶ್ವರ ಜೋಷಿ, ಅವದೂತ ವಿನಯ್ ಗುರೂಜಿ, ಬೇರುಗುಂಡಿ ಬ್ರಹನ್ಮಠದ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮಿಗಳು , ಅರಣ್ಯ ಸಚಿವ ಈಶ್ವರ ಖಂಡ್ರೆ, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್, ರಾಜ್ಯ ಪರಿಸರ ಮೌಲ್ಯ ಮಾಪನ ಪ್ರಾಧಿಕಾರದ ಅಧ್ಯಕ್ಷ ಎ. ಎನ್. ಮಹೇಶ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ, ಉಚ್ಚ ನ್ಯಾಯಾಲಯದ ನ್ಯಾಯವಾದಿ ಹಾಗೂ ಕಾನೂನು ಸಲಹೆಗಾರ ಅಮ್ರತೇಶ್, ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ್, ಉಪಾಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ, ಟಿ. ಪಿ ಕೃಷ್ಣನ್ ಮತ್ತಿತರರು ಉಪಸ್ಥಿತರಿದ್ದರು.