Share this news

 

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಿದ್ದು, ಅಲ್ಲದೇ 2 ರೇಪ್ ಕೇಸ್ ನಲ್ಲಿ ಒಟ್ಟು 10 ಲಕ್ಷ  ದಂಡವನ್ನೂ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಅಲ್ಲದೆ ಸಂತ್ರಸ್ತೆಗೆ 7 ಲಕ್ಷ ಪರಿಹಾರ ಕೂಡ ನೀಡುವಂತೆ ಕೋರ್ಟ್ ಸೂಚನೆ ನೀಡಿತು.

ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಬಿಎನ್ ಜಗದೀಶ್ ವಾದ ಮಂಡಿಸಿ, “ಪ್ರಜ್ವಲ್ ಕೃತ್ಯ ಅತ್ಯಂತ ಹೀನವಾದುದು. ಜೀವನೋಪಾಯಕ್ಕಾಗಿ ಕೆಲಸಕ್ಕೆ ಸೇರಿದ್ದ ಅನಕ್ಷರಸ್ಥ ಮಹಿಳೆಯ ಮೇಲೆ ಅತ್ಯಂತ ಅಮಾನುಷ ಕೃತ್ಯ ಎಸಗಲಾಗಿದೆ. ವಿಡಿಯೋಗಳು ಬಹಿರಂಗಗೊAಡ ನಂತರ ಸಂತ್ರಸ್ತೆ ತೀವ್ರ ಮಾನಸಿಕ ಹಿಂಸೆ ಅನುಭವಿಸಿ, ಆತ್ಮಹತ್ಯೆಗೂ ಯತ್ನಿಸಿದ್ದರು ಮಾತ್ರವಲ್ಲದೇ ಪ್ರಜ್ವಲ್ ಅವರ ವಿರುದ್ಧ ಇನ್ನೂ ಮೂರು ಅತ್ಯಾಚಾರ ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ ಎಂದು ಕೋರ್ಟ್ ಗಮನ ಸೆಳೆದರು.ಸಮಾಜದಲ್ಲಿ ತಮಗಿದ್ದ ಉನ್ನತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ಯಾವುದೇ ಪಶ್ಚಾತ್ತಾಪವಿಲ್ಲದೇ ಅಪರಾಧವನ್ನು ಎಸಗಿದ್ದಾರೆ. ಸಂತ್ರಸ್ತೆಯು ಬೇಡಿಕೊಂಡರೂ ಲೆಕ್ಕಿಸದೆ ಅತ್ಯಾಚಾರ ಮಾಡಿ, ಅದನ್ನು ವಿಡಿಯೋ ಕೂಡ ಮಾಡಿರುವುದು ಪ್ರಜ್ವಲ್ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಸಮಾಜಕ್ಕೆ ಕಠಿಣ ಸಂದೇಶ ರವಾನಿಸಲು ಅವರಿಗೆ ಜೀವಾವಧಿ ಶಿಕ್ಷೆಯನ್ನೇ ವಿಧಿಸಬೇಕು ಎಂದು ಜಗದೀಶ್ ಬಲವಾಗಿ ವಾದಿಸಿದರು.
ವಿಶೇಷ ಸರಕಾರಿ ಅಭಿಯೋಜಕ ಅಶೋಕ್ ನಾಯಕ್ ವಾದ ಮುಂದುವರಿಸಿ, ಅತೀ ಕಿರಿಯ ವಯಸ್ಸಿನಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ, ತಮ್ಮ ಸ್ಥಾನಕ್ಕೆ ಕಳಂಕ ತಂದಿದ್ದಾರೆ. ಅವರಿಗೆ ಗರಿಷ್ಠ ಶಿಕ್ಷೆಯ ಜೊತೆಗೆ, ಸಂತ್ರಸ್ತೆಯು ಸಾಮಾಜಿಕವಾಗಿ ಅನುಭವಿಸಿದ ಅವಮಾನ ಮತ್ತು ಮುಜುಗರಕ್ಕಾಗಿ ದೊಡ್ಡ ಮೊತ್ತದ ದಂಡವನ್ನು ವಿಧಿಸಿ, ಅದನ್ನು ಪರಿಹಾರವಾಗಿ ನೀಡಬೇಕು,” ಎಂದು ಮನವಿ ಮಾಡಿದರು.
ಪ್ರಜ್ವಲ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲೆ ನಳಿನಾ ಮಾಯೇಗೌಡ, “ಪ್ರಜ್ವಲ್ ಹಣಕ್ಕಾಗಿ ರಾಜಕೀಯಕ್ಕೆ ಬಂದವರಲ್ಲ, ಜನಸೇವೆ ಅವರ ಉದ್ದೇಶ ಆಗಿತ್ತು. 2024ರ ಲೋಕಸಭಾ ಚುನಾವಣೆಗೆ ಕೆಲವೇ ದಿನ ಇರುವಾಗ ಈ ವಿಡಿಯೋಗಳನ್ನು ದುರುದ್ದೇಶದಿಂದ ಹರಿಬಿಡಲಾಗಿತ್ತು. ಇದು ಅವರ ರಾಜಕೀಯ ಭವಿಷ್ಯವನ್ನೇ ನಾಶಮಾಡಲು ನಡೆಸಿದ ಕುತಂತ್ರ ಎಂದು ಆರೋಪಿಸಿದರು.ಪ್ರಜ್ವಲ್ ಇನ್ನೂ ಕೇವಲ 34 ವರ್ಷದ ಯುವಕ. ಈಗಾಗಲೇ ಒಂದು ವರ್ಷ ನಾಲ್ಕು ತಿಂಗಳಿAದ ಜೈಲಿನಲ್ಲಿ ಇದ್ದಾರೆ. ಈ ಪ್ರಕರಣದಿಂದ ಅವರ ತೇಜೋವಧೆಯಾಗಿದ್ದು, ಅಪಾರ ನಷ್ಟವನ್ನೂ ಅನುಭವಿಸಿದ್ದಾರೆ. ಅವರ ವೃತ್ತಿ ಜೀವನಕ್ಕೆ ಮಾರಕವಾಗುವಂತಹ ಶಿಕ್ಷೆಯನ್ನು ಯಾವುದೇ ಕಾರಣಕ್ಕೂ ನೀಡಬಾರದು. ಸಂತ್ರಸ್ತೆಗಿAತ ಪ್ರಜ್ವಲ್‌ಗೆ ಹೆಚ್ಚು ಹಾನಿಯಾಗಿದೆ ಎಂದು ವಾದಿಸಿದರು.
ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು. ಗರಿಷ್ಠ ಶಿಕ್ಷಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿತ್ತು. ಆದರೆ ಇಲ್ಲಿ ಪದೇ ಪದೇ ಅತ್ಯಾಚಾರವಾಗಿದೆ ಎಂದರು.
ವಾದ ಪ್ರತಿವಾದ ಆಲಿಸಿದ ನ್ಯಾ. ಸಂತೋಷ್ ಗಜಾನನ ಭಟ್ ಅಂತಿಮವಾಗಿ ಪ್ರಜ್ವಲ್ ಗೆ 5 ಲಕ್ಷ ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ನ್ಯಾಯಾಲಯದ ಆವರಣದಲ್ಲಿ ಪ್ರಜ್ವಲ್ ಗಳಗಳನೇ ಅತ್ತಿರುವ ಘಟನೆಯೂ ನಡೆಯಿತು. ಇತಿಹಾಸದಲ್ಲೇ ಮೊದಲ ಬಾರಿಗೆ ಮಾಜಿ ಸಂಸದನೋರ್ವ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದಂತಾಗಿದೆ.

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *