ಕಾರ್ಕಳ: ಕಲಂಬಾಡಿ ಪದವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ದಾನಿಗಳಿಂದ ಕೊಡಮಾಡಲ್ಪಟ್ಟ ಬ್ಯಾಗ್ ಹಾಗೂ ರೋಟರಿ ಕ್ಲಬ್ ಕಾರ್ಕಳ ಇವರು ಕೊಡಮಾಡಲ್ಪಟ್ಟ ಕೊಡೆ ವಿತರಣಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳ ಎಫ್ ಎ 1 ಪರೀಕ್ಷೆಯ ಉತ್ತರ ಪತ್ರಿಕೆಗಳ ಪರಿಶೀಲನ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷೆ ಸಂಗೀತ ಬಿ ಎನ್. ವಹಿಸಿದ್ದರು.
ಮುಖ್ಯ ಅತಿಥಿಗಳಾಗ ನೂತನ ಕಟ್ಟಡ ರಚನಾ ಸಮಿತಿ ಅಧ್ಯಕ್ಷ ನವೀನ್ ನಾಯಕ್ , ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, ನಿಟ್ಟೆ ಗ್ರಾ.ಪಂ ಸದಸ್ಯ ರಾಜೇಶ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷ ಸುರೇಶ್ ಆಚಾರ್ಯ ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಕುಲಾಲ್, ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್ ಹಾಗೂ ರೋಟರಿ ಕ್ಲಬ್ ಕಾರ್ಕಳ ಸದಸ್ಯರುಗಳಾದ ಅರುಣ್ ಶೆಟ್ಟಿ , ವಸಂತ್, ಬಾಲಕೃಷ್ಣ ದೇವಾಡಿಗ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಸ್ ಡಿ ಎಂ ಸಿ ಸದಸ್ಯರು, ಪೋಷಕ ವರ್ಗ ,ಹಳೆ ವಿದ್ಯಾರ್ಥಿ ಸಂಘದ ಸದಸ್ಯರುಗಳು , ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ನಮಿತಾ ಇವರು ಸ್ವಾಗತಿಸಿ, ವಿಜಯಲಕ್ಷ್ಮಿ ವಂದಿಸಿದರು .ರಶ್ಮಿ ದೇವಾಡಿಗ ಕಾರ್ಯಕ್ರಮವನ್ನು ನಿರೂಪಿಸಿದರು.