ಕಾರ್ಕಳ: ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅನುವು ಮಾಡಬೇಕೆಂದು ಒತ್ತಾಯಿಸಿ ಕಾರ್ಕಳ ಬಿಜೆಪಿ ವತಿಯಿಂದ ಕಾರ್ಕಳದಿಂದ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ವಾಹನ ಜಾಥಾ ನಡೆಯಿತು.
ಈ ಕಾರ್ಯಕ್ರಮಕ್ಕೆ ಬಜೆಪಿ ಹಿರಿಯ ಮುಖಂಡ ಬೋಳ ಪ್ರಭಾಕರ ಕಾಮತ್ ಪಕ್ಷದ ಧ್ವಜವನ್ನು ತೋರಿಸುವ ಮೂಲಕ ವಾಹನ ಜಾಥಾಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಸುನಿಲ್ ಕುಮಾರ್, ಮುಟ್ಲುಪಾಡಿ ಸತೀಶ್ ಶೆಟ್ಟಿ, ಮಹಾವೀರ ಹೆಗ್ಡೆ, ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಬೋಳ ಸತೀಶ್ ಪೂಜಾರಿ, ನವೀನ್ ಸಾಲ್ಯಾನ್, ಅಜೆಕಾರು ಜಗದೀಶ್ ಶೆಟ್ಟಿ, ಶಾಂತಿರಾಜ್ ಜೈನ್, ವಿಖ್ಯಾತ್ ಶೆಟ್ಟಿ, ರೇಶ್ಮಾ ಶೆಟ್ಟಿ ಇನ್ನಾ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಸುಮಾರು 250ಕ್ಕೂ ಅಧಿಕ ಕಾರು ಬೈಕ್ ಗಳ ಮೂಲಕ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡರು.