Share this news

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಸಹಕಾರ ಸಚಿವ ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಸಿಎಂ ಸಿದ್ಧರಾಮಯ್ಯನವರು ರಾಜಣ್ಣ ಅವರಿಂದ ರಾಜೀನಾಮೆ ಪಡೆದುಕೊಂಡಿದ್ದಾರೆ.ಎAದು ತಿಳಿದುಬದಿದೆ

ಬೆಂಗಳೂರಿನ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯಿಂದ ಮತ ಕಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದರು. ಈ ಕುರಿತು ನಿನ್ನೆಯಷ್ಟೇ ಸಹಕಾರ ಸಚಿವ ರಾಜಣ್ಣ ಅವರು ಸುದ್ದಿಗಾರರ ಜೊತೆ ಮಾತನಾಡಿ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿತ್ತು, ನಮ್ಮಿಂದ ಕೂಡ ಲೋಪವಾಗಿರಬಹುದು ಎನ್ನುವ ಹೇಳಿಕೆ ನೀಡಿದ್ದರು. ಇದರಿಂದ ಕಾಂಗ್ರೆಸ್ ಹೈಕಮಾಂಡ್ ರಾಜಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ರಾಜಣ್ಣ ಅವರನ್ನು ಸಂಪುಟದಿAದ ವಜಾ ಮಾಡುವಂತೆ ಸೂಚಿಸಿತ್ತು.

ಕೆಲವು ದಿನಗಳ ಹಿಂದೆ ತಮ್ಮನ್ನು ಹನಿಟ್ರ್ಯಾಪ್‌ ಗೆ ಕೆಡವಲು ಯತ್ನಿಸಿದ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಆದರೆ ತನಿಖಾ ತಂಡ ಕೆ.ಎನ್. ರಾಜಣ್ಣ ಅವರ ಆರೋಪ ಸುಳ್ಳು ಅಂತ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಕೆಎನ್‌ ರಾಜಣ್ಣ ಅವರು ಇತ್ತೀಚೆಗೆ ಪಕ್ಷ ಹಾಗೂ ರಾಹುಲ್‌ ಗಾಂಧಿ ವಿರುದ್ಧ ಮಾತನಾಡಿದ್ದರು. ಇನ್ನೂ ಲೋಕಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದನ್ನು ಸ್ಮರಿಸಿಕೊಳ್ಳಬಹುದಾಗಿದೆ. ಇದಲ್ಲದೇ ಬಹಿರಂಗವಾಗವಾಗಿಯೇ ಅವರು ಹೈಕಮಾಂಡ್‌ ವಿರುದ್ದ ಅಸಮಾಧನವನ್ನು ವ್ಯಕ್ತಪಡಿಸಿದ್ದರು.

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *