

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ, ಕಾರ್ಕಳ ತಾಲೂಕು ವೃತ್ತ ಮಟ್ಟದ ಪ್ರೌಢಶಾಲಾ ವಿಭಾಗದ, 14/17 ರ ವಯೋಮಿತಿಯ ವಾಲಿಬಾಲ್ ಪಂದ್ಯಾಟ ಕಾರ್ಕಳ ಸ್ವರಾಜ್ಯ ಮೈದಾನ ದಲ್ಲಿ ನಡೆದಿದ್ದು, ವೃತ್ತಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ, ಚರ್ಚ್ ಆಂಗ್ಲ ಮಾಧ್ಯಮ ಶಾಲೆ ಅಜೆಕಾರು ಇಲ್ಲಿಯ ಬಾಲಕರು ಪ್ರಥಮ ಸ್ಥಾನ ಪಡೆದು, ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ
ವಿಜೇತ ತಂಡಕ್ಕೆ ಚರ್ಚ್ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕರಾದ ವಂದನೀಯ ಗುರು, ಹೆನ್ರಿ ಮಸ್ಕರೇನಸ್, ಮುಖ್ಯ ಶಿಕ್ಷಕಿ ಶ್ರೀಮತಿ ರೇಷ್ಮಾ ಶೀಲಾ ರೋಡ್ರಿಗಸ್, ದೈಹಿಕ ಶಿಕ್ಷಣ ಶಿಕ್ಷಕರಾದ, ಸುಶಾಂತ್, ಶಿಕ್ಷಕ -ಶಿಕ್ಷಕೇತರ ವರ್ಗದವರು ಅಭಿನಂದಿಸಿದ್ದಾರೆ.



