

ನವದೆಹಲಿ, ಆ 14 :ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕುರಿತು ಕಳೆದ 2024 ಡಿಸೆಂಬರ್ ನಲ್ಲಿ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಆದರೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು ದರ್ಶನ್ ಹಾಗೂ ಆತನ ಗೆಳತಿ ಪವಿತ್ರಾ ಗೌಡಗೆ ಮತ್ತೆ ಜೈಲೇ ಗತಿಯಾಗಿದೆ. ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿ ಆದೇಶ ನೀಡಿದ್ದಾರೆ.
ನ್ಯಾ.ಆರ್. ಮಹಾದೇವನ್ ತೀರ್ಪು ಓದಿ, ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಹೇಳಿ ಜಾಮೀನು ರದ್ದುಗೊಳಿಸಿದರು. ಕಳೆದ ವಿಚಾರಣೆಯ ವೇಳೆ ನಟ ದರ್ಶನ್ ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರು ಸುಧೀರ್ಘವಾಗಿ ವಾದ ಮಂಡನೆ ಮಾಡಿದ್ದರು. ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡುವಾಗ ದರ್ಶನ್ ಸ್ಥಳದಲ್ಲಿ ಇದ್ದಿದ್ದು, ರೇಣುಕಾ ಸ್ವಾಮಿ ಹಲ್ಲೆ ಮಾಡಿರುವ ವಿಡಿಯೋ ಮಾಡಿದ್ದು, ಹಾಗೂ ಬಟ್ಟೆಯ ಮೇಲೆ ರಕ್ತದ ಕಲೆಗಳು ಸೇರಿದಂತೆ ಎಲ್ಲಾ ಸಾಕ್ಷಿಗಳನ್ನು ಸರ್ಕಾರದ ಪರ ವಕೀಲರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮುಂದೆ ವಿವರಿಸಿದ್ದರು.
ಇಂದು ವಾದ ಪ್ರತಿವಾದಗಳನ್ನು ಸಂಪೂರ್ಣವಾಗಿ ಆಲಿಸಿದ ಬಳಿಕ, ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು, ನಟ ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದುಗೊಳಿಸಿ ಆದೇಶ ನೀಡಿದೆ.
ಕಳೆದ ವರ್ಷ ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ನಾಲ್ಕು ತಿಂಗಳಿಗೂ ಅಧಿಕ ಸಮಯ ಜೈಲಿನಲ್ಲಿದ್ದರು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಡಿಸೆಂಬರ್ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಬಳಿ ಪ್ರಶ್ನೆ ಮಾಡಿತ್ತು. ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ ಈ ಹಿನ್ನೆಲೆಯಲ್ಲಿ ನಟ ದರ್ಶನ್ ಮತ್ತೆ ಪರಪ್ಪನ ಅಗ್ರಹಾರ ಜೈಲೇ ಗತಿ ಎಂಬAತಾಗಿದೆ.



