Share this news

ಉಡುಪಿ, ಆ14: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರನಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವ ಮನವಿ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ. ಆದರೆ ನಮ್ಮ ಪಕ್ಷ ಹೈಕಮಾಂಡ್ ಇರುವ ಪಕ್ಷ.‌ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ನಾವೆಲ್ಲರೂ ಬದ್ಧರಾಗಿರುತ್ತೇವೆ. ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಅದೇ ಫೈನಲ್ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯ ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ.
ಈಗ ಆ ಹಣವನ್ನ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ. ಹಣ ಬಿಡುಗಡೆಯಾಗಿ ಸರಿಸುಮಾರು ಐದು ಆರು ದಿನಗಳು ಕಳೆದಿವೆ ಎಲ್ಲರಿಗೂ ಹಣ ತಲುಪಲಿದೆ. ಜೂನ್ ತಿಂಗಳಿನ ಬಾಕಿ ಹಣ ಸಂದಾಯವಾಗಿದೆ. ಜುಲೈ ಹಣ ಕೆಲವೇ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಬರಲಿದೆ ಮುಂದಿನ ಗಣೇಶ ಚತುರ್ಥಿಯ ಒಳಗೆ ಗೃಹಲಕ್ಷ್ಮಿಯ ಜುಲೈ ತಿಂಗಳ ಹಣ ಬಿಡುಗಡೆ ಮಾಡಬೇಕೆನ್ನುವ ಆಸೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಏಳು ಸಹಚರರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನ್ಯಾಯಾಲಯ ತೀರ್ಪು ಕೊಟ್ಟ ನಂತರ ನಾವೆಲ್ಲರೂ ಅದಕ್ಕೆ ತಲೆಬಾಗಲೇಬೇಕು. ಸಂವಿಧಾನದಲ್ಲಿ ವಿಶ್ವಾಸ ಇರಿಸಿಕೊಂಡಿರುವ ನಾವೆಲ್ಲರೂ ತೀರ್ಪಿಗೆ ತಲೆಬಾಗಲೇಬೇಕು ಎಂದರು.

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *