

ಕಾರ್ಕಳ: ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯ ವ್ಯಕ್ತಿಯೊಬ್ಬರು ಆ.19 ಮಂಗಳವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾನಂಗಿಯ ಸಂಪತ್ ಅವರ ತಂದೆ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡವರು.
ಮಂಜುನಾಥ ಅವರು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅದೇ ಕಾರಣ ಅಥವಾ ಇನ್ನಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆ.19 ರಂದು ಹಿರ್ಗಾನ ಗ್ರಾಮದ ಸ್ವಾಗತ್ ವೈನ್ಸ್ ನ ಪಕ್ಕದ ಹೇಮಾವತಿ ಮಾಲೀಕತ್ವದ ಬಿಲ್ಡಿಂಗ್ ನ ಕೋಣೆಯಲ್ಲಿ ವಿದ್ಯುತ್ ವೈರ್ ಅನ್ನು ಬಳಸಿಕೊಂಡು ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














