

ಕಾರ್ಕಳ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಣ್ ದೀಪ್ ಡಿ ಅವರ ವರ್ಗಾವಣೆ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆದು ಸದರಿ ಇಲಾಖೆಯಲ್ಲಿ ಮುಂದುವರಿಸಬೇಕು ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಣ್ ದೀಪ್ ಅವರು ಇಲಾಖೆಯ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಅತ್ಯುತ್ತಮ ಕೆಲಸ ಮಾಡಿದ್ದರು. ಅವರನ್ನು ವರ್ಗಾವಣೆ ಮಾಡಿರುವುದು ಅವಕಾಶ ವಂಚಿತ ಆದಿವಾಸಿ ಸಮುದಾಯಕ್ಕೆ ತೀವ್ರ ಆಘಾತ ತಂದಿದೆ. ಕಳೆದ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳನ್ನು ಅತೀ ಶೀಘ್ರ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ಪಂಗಡದವರಿಗೆ ಒಳ ಮೀಸಲಾತಿಯನ್ನು ಕಾಲ ಮಿತಿಯಲ್ಲಿ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.














