ಹೆಬ್ರಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಹೈಸ್ಕೂಲ್ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಹೆಬ್ರಿ ಪಿ.ಆರ್.ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ 9ನೇ ತರಗತಿಯ ವಿದ್ಯಾರ್ಥಿ ನಿತೀಶ್ ಬೆಸ್ಟ್ ಅಟ್ಯಾಕರ್ ಹಾಗೂ 9 ನೇ ತರಗತಿಯ ಪ್ರಥಮ್ ಬೆಸ್ಟ್ ಸೆಟ್ಟರ್ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಮತ್ತು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಇವರನ್ನು ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಹಾಗೂ ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.