Share this news

ಹೆಬ್ರಿ,ಸೆ.03: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಗುರುಕೃಪಾ ಸೆಂಟ್ರಲ್ ಸ್ಕೂಲ್ ಬಲ್ಯೊಟ್ಟು ಹೊಸ್ಮಾರು ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ,ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಬಾಲಕರ ತಂಡ ಫೈನಲ್ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರಿನ ಬಾಲಕರ ತಂಡವನ್ನು ಮಣಿಸಿ ಸತತ ಮೂರನೇ ಬಾರಿಗೆ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆಯನ್ನು ಪಡೆದಿದೆ.
ಸೆ 11ರಂದು ಕೋಡಿಕನ್ಯಾಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಲಿದೆ.
ಕಬಡ್ಡಿ ತಂಡದ ಹುಡುಗರ ವಿಭಾಗದಲ್ಲಿ ವೀರಭದ್ರ ಉತ್ತಮ ದಾಳಿಗಾರ,ತ ಕುಮಾರ್ ಆಲ್ ರೌಂಡರ್ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದಾರೆ.
ಶಾಲಾ ಪ್ರಾಂಶುಪಾಲೆ ಬೇಬಿ ಶೆಟ್ಟಿ, ಉಪ ಪ್ರಾಂಶುಪಾಲ ರವೀಂದ್ರ ರಾವ್ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಕುಮಾರ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕಿ ಭಾರತಿಯವರ ಸತತವಾದ ತರಬೇತಿಯಿಂದ ಈ ಸಾಧನೆ ಸಾಧ್ಯವಾಗಿದ್ದು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ಹರೀಶ್ ಪೂಜಾರಿ ಮತ್ತು ಪದಾಧಿಕಾರಿಗಳು, ಹಳೆ ವಿದ್ಯಾರ್ಥಿಗಳು ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.

 

ಮುನಿಯಾಲು KPS ಶಾಲೆಯ 14ರ ವಯೋಮಾನದ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

 ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇಲ್ಲಿನ ಬಾಲಕರು ಪ್ರಥಮ ಸ್ಥಾನ ಪಡೆದು, ಕುಂದಾಪುರ ತಾಲೂಕಿನ ಕೋಡಿಕನ್ಯಾನದಲ್ಲಿ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *