ಕಾರ್ಕಳ,ಸೆ 06:ಕಾರ್ಕಳ ತಾಲೂಕಿನ 3 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 23 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಆನ್ ಲೈನ್ ಅರ್ಜಿ ಸಲ್ಲಿಸಬಹುದು.
https://karnemakaone.kar.nic.in/abcd/
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ನೀಡಲಾದ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಬೇಕು. ಭಾವಚಿತ್ರವನ್ನು ಅಪ್ಲೋಡ್ ಮಾಡಿದ ನಂತರ ಇ-ಸಹಿ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಅರ್ಜಿದಾರರು ತಮ್ಮ ಸಂಬಂಧ ಪಟ್ಟ ಎಲ್ಲಾ ದಾಖಲೆಗಳನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ದಾಖಲಾತಿಗಳು ಅಪ್ಲೋಡ್ ಆದ ಬಳಿಕ ಅರ್ಜಿಯನ್ನು ಮುದ್ರಿಸಬೇಕು.ಸೆ .6 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 10 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಯನ್ನು ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.