Share this news

ಪೆರ್ಡೂರು,ಸೆ.07:ಹೆಬ್ರಿಯ ಅಮೃತಭಾರತಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಬಸ್ ಹಾಗೂ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ.

ಮೃತರನ್ನು ಬೈಕ್ ಸವಾರ ಗಣೇಶ್ ಎಂದು ಗುರುತಿಸಲಾಗಿದೆ. ದೊಂಡರಂಗಡಿ ಕಡೆಯಿಂದ ಪೆರ್ಡೂರು ಕಡೆಗೆ ಬರುತ್ತಿದ್ದ ಅಮೃತ ಭಾರತಿ ಶಾಲೆಯ ಬಸ್ ಎದುರಿನಿಂದ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಈ ಅಪಘಾತದಿಂದ ಬೈಕ್ ಸವಾರ ಗಣೇಶ್ ಹಾಗೂ ಸಹಸವಾರ ಸುದರ್ಶನ್ ಬೈಕ್ ಸಮೇತ ರಸ್ತೆ ಅಪ್ಪಳಿಸಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಗಾಯಗೊಂಡ ಸುದರ್ಶನ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *