

ನವದೆಹಲಿ, ಸೆ.9: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿದ್ದಾರೆ.
ಈ ಚುನಾವಣೆಯಲ್ಲಿ ಸಿ.ಪಿ ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆದು 152 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದಿದ್ದಾರೆ.


