ಅಜೆಕಾರು: ಹಿಂದೂ ಸುರಕ್ಷಾ ಸಮಿತಿ ಅಜೆಕಾರು, ಶ್ರೀರಾಮ ಯಕ್ಷಗಾನ ಕಲಾಭಿಮಾನಿ ಬಳಗ ಅಜೆಕಾರು ಇವರ ಆಶ್ರಯದಲ್ಲಿ 25ನೇ ವರ್ಷದ ಮೊಸರು ಕುಡಿಕೆ ಉತ್ಸವವು ಸೆಪ್ಟೆಂಬರ್ 14 ರ ಆದಿತ್ಯವಾರ ಬೆಳಿಗ್ಗೆ 9 ರಿಂದ ಅಜೆಕಾರು ಪೇಟೆಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕಳೆದ 25 ವರ್ಷಗಳಿಂದ ಸಂಘಟನೆಯಲ್ಲಿ ಸೇವೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸ್ಥಳೀಯ ಹಿಂದೂ ಬಾಂಧವರಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ.
ಅಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ಉದ್ಯಮಿಗಳಾದ ವಿಜಯ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಅರ್ಚಕ ರಾಘವೇಂದ್ರ ಭಟ್ ಉದ್ಘಾಟನೆ ನೆರವೇರಿಸಲಿದ್ದು ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸುಧಾಕರ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ. ಸಾಯಂಕಾಲ 5:00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಜಗದೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರುಣ್ ಭಟ್ ಎಣ್ಣೆಹೊಳೆ, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾದ ರಾಜೇಶ್ ಉಚ್ಚಿಲ ಮತ್ತಿತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.