Share this news

ಕಾರ್ಕಳ: ದೇಶದಲ್ಲಿ ಬಲಿಷ್ಠ ಹಾಗೂ ಜನಪರ, ಭ್ರಷ್ಟಾಚಾರ ರಹಿತ ಆಡಳಿತ ನೀಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದ ಸನ್ಮಾನ್ಯ ಪ್ರಧಾನ ಮಂತ್ರಿ  ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿಯಿಂದ “ಸೇವಾ ಪಾಕ್ಷಿಕ” ಸಾಮಾಜಿಕ ಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ದೇಶಾದ್ಯಂತ “ಸೇವಾ ಪಾಕ್ಷಿಕ” ಅಭಿಯಾನದಡಿಯಲ್ಲಿ ಪ್ರಧಾನಿ  ನರೇಂದ್ರ ಮೋದಿಯವರ ಜನ್ಮದಿನವಾದ ಸೆಪ್ಟೆಂಬರ್ 17 ರಿಂದ ಮಹಾತ್ಮ ಗಾಂಧಿ ರವರ ಜನ್ಮದಿನವಾದ ಅಕ್ಟೋಬರ್ 02 ರ ಅನೇಕ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿದೆ. ಇದರ ಅಂಗವಾಗಿ ಸೆ.11 ರಂದು ಕಾರ್ಕಳ ಮಂಡಲದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಸೇವಾ ಪಕ್ಷಿಕಾ ಅಭಿಯಾನವು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ದೇಶವ್ಯಾಪಿಯಾಗಿ ನಡೆಯಲಿರುವ ಸೇವಾ ಕಾರ್ಯಕ್ರಮಗಳ ಸರಣಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಜೊತೆಗೆ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಸ್ಮರಿಸುವ ಉದ್ದೇಶ ಹೊಂದಿದೆ. ಇದರಡಿಯಲ್ಲಿ ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಆರೋಗ್ಯ ತಪಾಸಣೆ ಶಿಬಿರಗಳು, ವೃಕ್ಷಾರೋಪಣಾ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಜನಸೇವಾ ಕಾರ್ಯಗಳನ್ನು ನಡೆಸಲಾಗುತ್ತದೆ ಕಾರ್ಕಳ ಮಂಡಲದ ವಿವಿಧ ಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ನವೀನ್ ನಾಯಕ್ ತಿಳಿಸಿದರು.
ಈ ಅಭಿಯಾನವು “ಸೇವೆ, ಸುಶಾಸನ ಮತ್ತು ಗರೀಬ್ ಕಲ್ಯಾಣ” ಎಂಬ ಪಾರ್ಟಿಯ ಪ್ರಮುಖ ತತ್ವದ ಆಧಾರದ ಮೇಲೆ “ಸೇವೆ ಪರಮ ಧರ್ಮ” ಎಂಬ ಮನೋಭಾವದಿಂದ ಸಮಾಜದ ವಿವಿಧ ವರ್ಗಗಳನ್ನು ಸಂಪರ್ಕಿಸಿ, ಜನರ ಹಿತಕ್ಕಾಗಿ ಸೇವೆ ಸಲ್ಲಿಸುವ ಉದ್ದೇಶವನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ಕರ್ಕಳ ಮಂಡಲದ ವಿವಿಧ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ, ಆರೋಗ್ಯ ತಪಾಸಣೆ ಶಿಬಿರ ಹಾಗೂ ಯುವಜನರನ್ನು ಒಳಗೊಂಡ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.
ಈ ಕಾರ್ಯಾಗಾರದಲ್ಲಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮುಖಂಡರಾದ ಮಣಿರಾಜ್ ಶೆಟ್ಟಿ, ಸೇವಾ ಪಕ್ಷಿಕಾದ ಮಂಡಲ ಸಂಚಾಲಕರಾದ ಸತೀಶ್ ಬೋಳ, ರವೀಂದ್ರ ಕುಮಾರ್, ಪ್ರವೀಣ್ ಸಾಲಿಯಾನ್, ವಿವಿಧ ಶಕ್ತಿಕೇಂದ್ರಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಹಾಗೂ ಗ್ರಾಮ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ ಸ್ವಾಗತಿಸಿದರು, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *