ಪಡುಬಿದ್ರೆ, ಸೆ.19: ಕಾಪು ಸಮೀಪದ ಬಡಾ ಗ್ರಾಮದ ಉಚ್ಚಿಲ ಪೊಲ್ಯ ಮೈದಾನದ ಬಳಿ ಸೆ.18ರಂದು ಗುರುವಾರ ಇಬ್ಬರು ಯುವಕರು ಎಂಡಿಎಂಎ ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಖಚಿತವಾದ ಮಾಹಿತಿ ಪಡೆದ ಕಾಪು ಪೊಲೀಸ್ ಠಾಣೆಯ ಪಿಎಸ್ಐ ಸಕ್ತಿವೇಲು ಹಾಗೂ ಸಿಬ್ಬಂದಿಗಳು ಇಬ್ಬರು ಆರೋಪಿಗಳಾದ ಕಾಪು ಫಕೀರನಕಟ್ಟೆ ಒಂದು ಮೋಟರ್ ಸೈಕಲ್ ನ ಮಸೀದಿ ಬಳಿ ನಿವಾಸಿ ಫರ್ಹಾನ್ ಹಾಗೂ ಕಾಪು ಮಜೂರು ಕೊಂಬಗುಡ್ಡೆ ನಿವಾಸಿ ಮೊಹಮ್ಮದ್ ಹಾಶಿಂ ಎಂಬವರನ್ನು ವಶಕ್ಕೆ ಪಡೆದು ಆರೋಪಿಗಳ ಪ್ಯಾಂಟಿನ ಕಿಸೆಯಲ್ಲಿದ್ದ 9.30 ಗ್ರಾಂ ತೂಕದ ಎಂಡಿಎಂಎ ಮಾದಕವಸ್ತು ಮತ್ತು 5 ಸಾವಿರ ನಗದು, ಎರಡು ಮೊಬೈಲ್ ಹಾಗೂ ಬೈಕ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧಿಕ್ಷಕ ಹರಿರಾಮ್ ಶಂಕರ್ ಆದೇಶದಂತೆ, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಸದಾನಂದ ಎಸ್ ನಾಯಕ್ ಮತ್ತು ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಡಾI ಹರ್ಷ ಪ್ರಿಯಂವದಾ ಮಾರ್ಗದರ್ಶನದಂತೆ ಕಾಪು ವೃತ್ತ ನಿರೀಕ್ಷಕ ಜಯಶ್ರೀ ಮಾನೆ ರವರ ನೇತೃತ್ವದಲ್ಲಿ ಪಡುಬಿದ್ರಿ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಶ್ರೀ ಸಕ್ತಿವೇಲು ಇ ( ಕಾ.ಸು) ಮತ್ತು ಅನಿಲ್ ಕುಮಾರ್(ತನಿಖೆ) ಸಿಬ್ಬಂದಿಗಳಾದ ಎ ಎಸ್ ಐ ರಾಜೇಶ್ ಪಿ, ಎ ಎಸ್ ಐ ಗಿರೀಶ್ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ರಸಾದ್, ರಮೇಶ್, ಕಾನ್ಸ್ಟೇಬಲ್
ಸಂದೇಶ, ಮಹಿಳಾ ಕಾನ್ಸ್ಟೇಬಲ್ ರುಕ್ಮಿಣಿ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ತಾಂತ್ರಿಕ ವಿಭಾಗದ ಸಿಬ್ಬಂದಿ ಪಿಸಿ ದಿನೇಶ್ ರವರು ಸಹಕರಿಸಿದ್ದಾರೆ.