ಹೆಬ್ರಿ,ಸೆ.20: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಬಂಧಿತ ಜಿಲ್ಲಾ ಮಟ್ಟದ ಕ್ರೀಡಾಕೂಟವು ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯಿತು.
ವಿವಿಧ ಶಿಕ್ಷಣ ಸಂಸ್ಥೆಗಳ ಗೌರವ ವಂದನೆ ಸ್ವೀಕರಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ರಹ್ಮಾವರ ವಲಯ ಪ್ರೌಢಶಾಲಾ ಸಹಶಿಕ್ಷಕ ಸಂಘದ ಅಧ್ಯಕ್ಷ ಮನೋಹರ ಹೆಗ್ಡೆ ಮಾತನಾಡಿ, ಕ್ರೀಡೆಯು ಆರೋಗ್ಯಕರ ಸ್ಪರ್ಧೆಯಾಗಬೇಕು. ಎಲ್ಲಾ ಸ್ಪರ್ಧೆಯಲ್ಲಿ ಭಾಗವಹಿಸಿ ದೇಶವನ್ನು ಪ್ರತಿನಿಧಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಸ್ಪೂರ್ತಿದಾಯಕ ಮಾತಗಳನ್ನಾಡಿದರು.
ಈ ಸಂದರ್ಭದಲ್ಲಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಅಧ್ಯಕ್ಷ ಪಾಂಡುರಂಗ ಪೈ ಅಧ್ಯಕ್ಷತೆ ವಹಿಸಿದ್ದರು.
ಅಮೃತಭಾರತಿ ಟ್ರಸ್ಟ್ ನ ಕಾರ್ಯದರ್ಶಿ ಗುರುದಾಸ್ ಶೆಣೈ, ಕಾಲೇಜಿನ ಅಧ್ಯಕ್ಷ ರಾಜೇಶ್ ನಾಯಕ್, ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿ, ಟ್ರಸ್ಟ್ ನ ಸದಸ್ಯರಾದ ಬಾಲಕೃಷ್ಣ ಮಲ್ಯ, ಲಕ್ಷ್ಮಣ್ ಭಟ್, ವಿಷ್ಣುಮೂರ್ತಿ ನಾಯಕ್, ಭಾಸ್ಕರ್ ಜೋಯಿಸ್, ವಸತಿ ನಿಲಯದ ಸದಸ್ಯ ರಾಮಕೃಷ್ಣ ಆಚಾರ್ಯ, ವಿದ್ಯಾಭಾರತಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ, ಸಂಸ್ಥೆಯ ಮುಖ್ಯಸ್ಥರಾದ ಪ್ರಕಾಶ್ ಜೋಗಿ, ಅರುಣ್ ಕುಮಾರ್ ಹೆಚ್ ವೈ, ಅಪರ್ಣಾ ಆಚಾರ್, ಶಕುಂತಲಾ, ಅನಿತಾ ಹಾಗೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮತ್ತು ವಿದ್ಯಾಭಾರತಿ ಜಿಲ್ಲಾ ಕ್ರೀಡಾ ಪ್ರಮುಖ್ ವಿಜಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್ ಹೆಗ್ಡೆ ಸ್ವಾಗತಿಸಿ, ರವೀಂದ್ರ ಶೆಟ್ಟಿ ವಂದಿಸಿದರು.