ಬೆಂಗಳೂರು ಸೆ 22: ರಾಜ್ಯ ಸರ್ಕಾರದ ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದ್ದು, ಈ ಅರ್ಜಿಯನ್ನು ಇಂದು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠವು ಜಾತಿಗಣತಿ ಕುರಿತಂತೆ ತಡೆಯಾಜ್ಞೆ ನೀಡುವ ಸಂಬAಧದ ಅರ್ಜಿಯ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.ನಾಳೆ ಸರ್ಕಾರದ ಜಾತಿ ಗಣತಿ ಭವಿಷ್ಯ ನಿರ್ಧಾರವಾಗಲಿದೆ.
ಜಾತಿಗಣತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ್ ನಾದವಗಿ ವಾದ ಮಂಡಿಸಿದರು. ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿ, ಜಾತಿಗಣತಿಯು ಜನಗಣತಿ ಸರ್ವೇಗೆ ಸಮನಾಗಿದೆ, ಆದ್ದರಿಂದ ಜನಗಣತಿಯನ್ನು ಕೇಂದ್ರ ಸರ್ಕಾರವಷ್ಟೇ ಮಾಡಬೇಕೆಂದು ವಾದಿಸಿದರು. ರಾಜ್ಯ ಸರ್ಕಾರ ಜಾತಿ ಗಣತಿಗೆ ಆದೇಶಿಸಿದ್ದು, ಇದು ಸಂವಿಧಾನದ ಪರಿಚ್ಚೇದ 342ಎ(3)ಗೆ ವಿರುದ್ಧವಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ವರದಿ ಪರಿಗಣಿಸದೇ ಹೊಸ ಪ್ರಕ್ರಿಯೆ ಆರಂಭಿಸಲಾಗಿದೆ.ಇದಲ್ಲದೇ ಜಾತಿಗಣತಿಯ ಅಂಕಿಅAಶಗಳನ್ನು ಜಿಯೋ ಟ್ಯಾಗಿಂಗ್ ಆಧಾರ್ ಗೆ ಲಿಂಕ್ ಮಾಡಲಾಗುತ್ತಿದ್ದು ಸರ್ಕಾರದ ಈ ಕ್ರಮ ಕಾನೂನು ಬಾಹಿರವಾಗಿದೆ ಎಂಬುದಾಗಿ ವಾದಿಸಿದರು.
ಅರ್ಜಿದಾರರ ಪರವಾಗಿ ಅಶೋಕ್ ಹಾರನಹಳ್ಳಿ ವಾದಿಸಿ, ಹೊಸ ಜಾತಿಗಳನ್ನು ಸರ್ಕಾರ ಸೃಷ್ಠಿ ಮಾಡುತ್ತಿದೆ. ಒಕ್ಕಲಿಗ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್ ಎಂದು ವಿಂಗಡಿಸಿದ್ದಾರೆ. ಯಾವುದೇ ಅಂಕಿ ಅಂಶದ ವಿಶ್ಲೇಷಣೆ ಇಲ್ಲದೆಯೂ ಜನಗಣತಿ ಮಾಡಲಾಗುತ್ತಿದೆ. ಜನಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲವೆಂದು ವಾದಿಸಿದರು.
ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ಇದೇ ರೀತಿಯ ಪ್ರಕರಣದಲ್ಲಿ ಹಿಂದೆಯೂ ಮಧ್ಯಂತರ ತಡೆ ನೀಡಿಲ್ಲ. ಜನಗಣತಿ ಮಾಡುತ್ತಿಲ್ಲ. ಕೇವಲ ಸರ್ವೆ ಮಾಡುತ್ತಿದ್ದೇವೆ. ಹೀಗಾಗಿ ಯಾವುದೇ ಮಧ್ಯಂತರ ತಡೆ ನೀಡದಂತೆ ಮನವಿ ಮಾಡಿದರು. ಅಂಕಿ-ಅAಶ ಸಂಗ್ರಹಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಸರ್ವೆ ಮೂಲಕ ಅಂಕಿ-ಅAಶ ಸಂಗ್ರಹಿಸಲಾಗುತ್ತಿದೆ. ಸಾಮಾಜಿಕ, ಆರ್ಥಿಕ, ಹಿಂದುಳಿದಿರುವಿಕೆಯ ಅಂಕಿ-ಅAಶ ಸಂಗ್ರಹಿಸುತ್ತಿದ್ದೇವೆ ಎಂಬುದಾಗಿ ವಾದಿಸಿದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭ್ರು ಬಖ್ರು ಅವರು ಎಲ್ಲಾ ಅರ್ಜಿದಾರರು ನಿಮ್ಮ ಲಿಖಿತ ಸಾರಾಂಶ ಸಲ್ಲಿಸಿ ಪ್ರತಿಯೊಬ್ಬರಿಗೂ ಎಷ್ಟು ಸಮಯ ಬೇಕೆಂದು ತಿಳಿಸಿ ಅರ್ಜಿದಾರರ ವಾದದಲ್ಲಿ ಹುರುಳಿರುವಂತಿದೆ.ಸರ್ವೇ ಸಧ್ಯಕ್ಕೆ ಮುಂದೂಡಲು ಸಾಧ್ಯವೇ ಎಂಬುದಾಗಿ ಸರ್ಕಾರದ ಪರ ವಕೀಲರಿಗೆ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸರ್ಕಾರದ ಪರ ವಕೀಲ ಸಿಂಘಿ ದಸರಾ ಬಳಿಕ ಅಂತಿಮ ವಿಚಾರಣೆ ನಡೆಸಬಹುದು. ಈಗ ಮಧ್ಯಂತರ ತಡೆ ಬೇಕಿಲ್ಲವೆಂದು ವಾದಿಸಿದರು. ಈ ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಪೀಠವು ನಾಳೆ ಮಧ್ಯಾಹ್ನ 2.30ಕ್ಕೆ ಜಾತಿಗಣತಿ ಪ್ರಶ್ನಿಸಿದ್ದ ಪಿಐಎಲ್ ಬಗ್ಗೆ ತಡೆಯಾಜ್ಞೆ ನೀಡುವ ಕುರಿತಂತೆ ವಿಚಾರಣೆ ನಿಗದಿ ಪಡಿಸಿ, ವಿಚಾರಣೆಯನ್ನು ಮುಂದೂಡಿದೆ.