ಕಾರ್ಕಳ:ನಿಟ್ಟೆ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ(ರಿ.) ವತಿಯಿಂದ ಸಮಾಜ ಕಲ್ಯಾಣಾರ್ಥವಾಗಿ ವಿಶ್ವಕರ್ಮ ಪೂಜಾ ಮಹೋತ್ಸವವು ಶ್ರೀ ಕಾಳಿಕಾಂಬಾ ಮಹಿಳಾ ಸೇವಾ ಸಮಿತಿ ಹಾಗೂ ವಿಶ್ವಕರ್ಮ ಯುವವೇದಿಕೆ ನಿಟ್ಟೆ ಇವರ ಸಹಭಾಗಿತ್ವದಲ್ಲಿ ನಿಟ್ಟೆ ಪ್ರಾಥಮಿಕ ಶಾಲೆಯ ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಸಭಾಭವನದಲ್ಲಿ, ಬೋಳಾ ಮಂಜುನಾಥ ಪುರೋಹಿತರ ಪೌರೋಹಿತ್ಯದಲ್ಲಿ ನಡೆಯಿತು.
ಸಮಿತಿಯ ಅಧ್ಯಕ್ಷ ಹರ್ಷವರ್ಧನ್ ಆಚಾರ್ಯ ನಿಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ಮುಖ್ಯ ಅತಿಥಿಗಳಾಗಿ ನಿಟ್ಟೆ ಅಟಲ್ ಇನ್ಕ್ಯುಬೇಷನ್ ಸೆಂಟರ್ ನ ಸಿ.ಇ.ಓ ಡಾ| ಅನಂತಪದ್ಮನಾಭ ಆಚಾರ್ಯ, ಉಡುಪಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾ ಕೆ. ಬಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಮತ್ತು ಜಿಲ್ಲಾ ಲೆಕ್ಕಾಧಿಕಾರಿ ವಿಜಯ್ ಕುಮಾರ್ ಹಾಗೂ ಶ್ರೀಮತಿ ರೂಪಾ ವಸುಂಧರ ಆಚಾರ್ಯರಿಗೆ “ಪ್ರೇರಣಾ ರತ್ನ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಸಮಿತಿಯ ವತಿಯಿಂದ ಪ್ರತಿಭಾನ್ವಿತ 50 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ದ್ವಿತೀಯ ಪಿ.ಯು.ಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕುಮಾರಿ ವಿನುತಾ ಹಾಗೂ ಎಸ್. ಎಸ್.ಎಲ್.ಸಿ ವಿಭಾಗದಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಕುಮಾರಿ ಸೌಜನ್ಯಾಳಿಗೆ “ವಿದ್ಯಾ ರತ್ನ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿಯ ಗೌರವಾಧ್ಯಕ್ಷ ಜಯಾನಂದ ಆಚಾರ್ಯ ಸ್ವಾಗತಿಸಿ, ಕಾರ್ಯದರ್ಶಿ ಮುರಳೀಧರ ಆಚಾರ್ಯ ವಾರ್ಷಿಕ ವರದಿಯನ್ನು ವಾಚಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಆಚಾರ್ಯ, ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರುಗಳಾದ ರಾಮಚಂದ್ರ ಆಚಾರ್ಯ, ರವಿ ಆಚಾರ್ಯ, ಕಾರ್ಕಳ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಮೆನೇಜರ್ ದಿನೇಶ್ ಆಚಾರ್ಯ, ಕಾರ್ಕಳ ಬಿಜೆಪಿಯ ಅಧ್ಯಕ್ಷರಾದ ನವೀನ್ ನಾಯಕ್, ನಿಟ್ಟೆ ನಡಿಮನೆಯ ಬಿ. ಕೆ. ನಾಯಕ್, ಯಕ್ಷತೀರ್ಥ ಕಲಾ ಸೇವೆಯ ಸದಾನಂದ ಆಚಾರ್ಯ ನೂರಾಲ್ ಬೆಟ್ಟು ಸಮಿತಿಯ ಉಪಾಧ್ಯಕ್ಷ ಲಕ್ಷ್ಮಣ ಆಚಾರ್ಯ, ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ವತ್ಸಲಾ ಉಮೇಶ ಆಚಾರ್ಯ, ಗೌರವಾಧ್ಯಕ್ಷೆ ವೀಣಾ ದಿವಾಕರ ಆಚಾರ್ಯ, ಉಪಾಧ್ಯಕ್ಷೆ ಪ್ರಮಿಳಾ ಜಲಂಧರ ಆಚಾರ್ಯ, ಹಾಗೂ ಕಾರ್ಯದರ್ಶಿ ರಕ್ಷಿತಾ ಸುನಿಲ್ ಆಚಾರ್ಯ, ಕೋಶಾಧಿಕಾರಿ ಆಶಾ ಜಯಾನಂದ ಆಚಾರ್ಯ ವಿಶ್ವಕರ್ಮ ಯುವವೇದಿಕೆಯ ಅಧ್ಯಕ್ಷ ಪ್ರದೀಪ್ ಆಚಾರ್ಯ ಪರಪ್ಪಾಡಿ, ಉಪಾಧ್ಯಕ್ಷ ಸುಧೀರ್ ಆಚಾರ್ಯ ಕಲ್ಯಾ ಹಾಗೂ ವಿವಿಧ ವಿಶ್ವಕರ್ಮ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಸಾದ್ ಆಚಾರ್ಯ, ಕುಮಾರಿ ಶ್ರೇಯಾ, ಕುಮಾರಿ ಸೃಜಾ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಶ್ರೀಧರ ಆಚಾರ್ಯ ಕೆಮ್ಮಣ್ಣು ವಂದಿಸಿದರು.