ಕಾರ್ಕಳ: ಕಾರ್ಕಳ ದ ಸರಕಾರಿ ಆಸ್ಪತ್ರೆ ಬಳಿ ಸೆ.22 ರಂದು ಸ್ಕೂಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಟ್ಟೆಯ ಸತೀಶ್ ಕುಮಾರ್ (60) ಗಾಯಗೊಂಡವರು.
ಅವರು ಸೆ.22 ರಂದು ತಮ್ಮ ಸ್ಕೂಟರ್ ನಲ್ಲಿ ಆನೆಕೆರೆ ಕಡೆಯಿಂದ ಕಾರ್ಕಳ ಆಸ್ಪತ್ರೆಯ ಮಾರ್ಗವಾಗಿ ಕಾರ್ಕಳ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದಾಗ ಕಾರ್ಕಳ ಕಸಬಾ ಗ್ರಾಮದ ಸರಕಾರಿ ಆಸ್ಪತ್ರೆಯ ಬಳಿ ಹಿಂದುಗಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.