

ಕಾರ್ಕಳ, ಅ,04: ಹಿರಿಯ ವಕೀಲರು ಹಾಗೂ ಬಿಜೆಪಿಯ ಹಿರಿಯ ಮುಂದಾಳುವಾಗಿದ್ದ ಎಂ.ಕೆ.ವಿಜಯಕುಮಾರ್ ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್ ನಝೀರ್ ಸೇರಿದಂತೆ ನೂರಾರು ಗಣ್ಯರು ಎಂ.ಕೆ ವಿಜಯಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ವಕೀಲ ವೃತ್ತಿಯ ತನ್ನ ಗುರು ಎಂ.ಕೆ ವಿಜಯ ಕುಮಾರ್ ಅವರ ನಿಧನದ ಸುದ್ದಿ ತಿಳಿದ ತಕ್ಷಣವೇ ಅಬ್ದುಲ್ ನಝೀರ್ ಅವರು ತನ್ನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿ ಆಂಧ್ರಪ್ರದೇಶದಿAದ ನೇರವಾಗಿ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಬಂದು ನಂತರ ರಸ್ತೆ ಮಾರ್ಗವಾಗಿ ಕಾರ್ಕಳಕ್ಕೆ ಬಂದು ಗುರುಗಳಾದ ಎಂ.ಕೆ ವಿಜಯ ಕುಮಾರ್ ಅವರ ಪಾರ್ಥಿವ ಶರೀರಕ್ಕೆ ಹೂಗುಚ್ಚ ಅರ್ಪಿಸಿ ಅಂತಿಮ ನಮನ ಸಲ್ಲಿಸಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಡಿಸಿಸಿ ಬಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್, ಶಾಸಕ ಸುನಿಲ್ ಕುಮಾರ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ,ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಗೀತಾಂಜಲಿ ಸುವರ್ಣ, ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ಬಿಜೆಪಿ ಮುಖಂಡರುಗಳು ಸಹಿತ ನೂರಾರು ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ಎಂ.ಕೆ ವಿಜಯಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಶನಿವಾರ ಮುಂಜಾನೆಯಿAದ ಸಾವಿರಾರು ಜನ ಸರತಿ ಸಾಲಿನಲ್ಲಿ ಬಂದು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.


