

ಕಾರ್ಕಳ: ಕಾರ್ಕಳದ ಡಾ.ಟಿ ಎಂ ಎ ಪೈ ರೋಟರಿ ಆಸ್ಪತ್ರೆಯ ಬಳಿ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕಸಬಾ ಗ್ರಾಮದ ತೆಳ್ಳಾರು ರಸ್ತೆಯ ನಿವಾಸಿ ಪ್ರಕಾಶ್ಚಂದ್ರ(55) ಮೃತಪಟ್ಟವರು.
ಪ್ರಕಾಶ್ಚಂದ್ರ ಅವರು ಅ.3 ರಂದು ಮಧ್ಯಾಹ್ನ ಅತ್ತೂರಿನಿಂದ ಕ್ರಿಯೇಟಿವ್ ಕಾಲೇಜಿನ ಕಡೆಗೆ ಬಾಡಿಗೆಗೆ ಹೋಗುತ್ತಿದ್ದಾಗ ಕಾರ್ಕಳ ಟಿ ಎಮ್ ಎ ಪೈ ಆಸ್ಪತ್ರೆಯ ಎದುರುಗಡೆ ರಸ್ತೆಯಲ್ಲಿ ಹೋಗುತ್ತಿರುವಾಗ ಎದೆನೋವು ಬಂದಿದ್ದು, ತಾನು ಚಲಾಯಿಸುತ್ತಿದ್ದ ರಿಕ್ಷಾವನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ ಕುಸಿದು ಬಿದ್ದಿದ್ದರು.
ಕೂಡಲೇ ಅವರನ್ನು ಡಾ. ಟಿ ಎಂ ಎ ಪೈ ಆಸ್ಪತ್ರೆಗೆ ದಾಖಲಿಸಿದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


