ಉಡುಪಿ, ಅ,08: ಜಮ್ಮು ಕಾಶ್ಮೀರ ಸರಕಾರದ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಡುಪಿ ಜಿಲ್ಲೆಯ ಹಿರಿಯಡ್ಕ ಮೂಲದ ಹಿರಿಯ ಐಎಎಸ್ ಅಧಿಕಾರಿ ರಾಜೇಶ್ ಪ್ರಸಾದ್ ಅವರನ್ನು ಕೇಂದ್ರ ಸರಕಾರದ ಗೃಹ ಸಚಿವಾಲಯ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಾಗಿ ನೇಮಿಸಿ ಆದೇಸಿದ್ದು, ಅವವರು ನೂತನ ಸಿಎಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಎಚ್.ರಾಜೇಶ್ ಪ್ರಸಾದ್ ಮೂಲತಃ ಹಿರಿಯಡ್ಕದ ಬೊಮ್ಮಾರಬೆಟ್ಟಿನವರು. 1967ರ ಜೂನ್ 1 ರಂದು ಜನಿಸಿರುವ ರಾಜೇಶ್ ಪ್ರಸಾದ್ ತಮ್ಮ ಪ್ರಾಥಮಿಕ, ಪ್ರೌಢಶಾಲಾ, ಪದವಿಪೂರ್ವ ಶಿಕ್ಷಣವನ್ನು ಬೊಮ್ಮಾರಬೆಟ್ಟು ಮತ್ತು ಹಿರಿಯಡಕ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಮುಗಿಸಿ, ತದನಂತರ ಉಡುಪಿಯ ಎಂಜಿಎA ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪದವಿ ಶಿಕ್ಷಣ ಮುಗಿಸಿ ಬಳಿಕ ಕಾನೂನು ಪದವಿ ಪಡೆದು, ಬೆಂಗಳೂರಿನ ಇಂಡಿಯನ್ ಇನ್ಸಿ÷್ಟಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ಎಂಬಿಎ ಸ್ನಾತಕೋತ್ತರ ಪದವಿ ಶಿಕ್ಷಣ ಪಡೆದಿದ್ದಾರೆ.1992ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಾಜೇಶ್ ಪ್ರಸಾದ್ ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ಇದೀಗ ಚಂಢೀಗಡ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕೊಂಡು ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ.