Share this news

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರ ಉದ್ಯೋಗಸ್ಥ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಸಹಿತ ‘ಋತುಚಕ್ರ ರಜೆ’ಗೆ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಒಪ್ಪಿಗೆ ಲಭಿಸಿದೆ. ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ.ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್​​ಕೆ ಪಾಟೀಲ್ ಈ ಮಾಹಿತಿ ಬಹಿರಂಗಪಡಿಸಿದರು.

ನೂತನ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಅನುಮೋದನೆ ನೀಡಲಾಗಿದೆ.

ಮುಟ್ಟಿನ ರಜೆ ಕೊಡುವ ನಿಯಮ ಜಾರಿಗೆ ತರಲು ಕಳೆದ ಒಂದು ವರ್ಷದದಿಂದ ಪ್ರಯತ್ನ ಮಾಡಿದ್ದೆವು. ಮಹಿಳೆಯರು ಹಲವು ಕೆಲಸಗಳನ್ನು ಮಾಡುತ್ತಾರೆ. ಮನೆ ಕೆಲಸದ ಜೊತೆ ಮಕ್ಕಳನ್ನು ನೋಡಿಕೊಳ್ಳಬೇಕು. ಮುಟ್ಟಿನ ಸಂದರ್ಭದಲ್ಲಿ ಮಾನಸಿಕವಾಗಿಯೂ ಒತ್ತಡ ಅನುಭವಿಸುತ್ತಾರೆ. ಹೀಗಾಗಿ ಮುಟ್ಟಿನ ರಜೆ ನೀಡುವ ಬಗ್ಗೆ ಪರಾಮರ್ಶೆ ನಡೆಸಲು ಸಮಿತಿ ರಚನೆ ಮಾಡಿದ್ದೆವು. ಸಮಿತಿ 6 ದಿನಗಳ ಕಾಲ ರಜೆ ಕೊಡಬೇಕು ಎಂದು ಅಲಹೆ ನೀಡಿತ್ತು. ಸರಕಾರ ವಾರ್ಷಿಕ 12 ದಿನ ರಜೆ ಕೊಡುವ ನಿರ್ಧಾರವನ್ನು ಮಾಡಿದೆ. ಬೇರೆ ರಾಜ್ಯಗಳಲ್ಲಿ ಹೇಗೆ ಅನುಷ್ಠಾನವಾಗಿದೆ ಗೊತ್ತಿಲ್ಲ. ಕರ್ನಾಟಕಲ್ಲಿ ನಾವು ಅನುಷ್ಠಾನ ಮಾಡುತ್ತೇವೆ. ಎಲ್ಲ ವಲಯದಲ್ಲೂ ಅನ್ವಯವಾಗುತ್ತೆ. ಸರಕಾರಿ, ಖಾಸಗಿ ವಲಯದಲ್ಲೂ ಅನ್ವಯವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *