ಬಾಗಲಕೋಟೆ, ಅ,14: ಹೈಕಮಾಂಡ್ ಕೃಪಾಕಟಾಕ್ಷ ಹಾಗೂ ಶಾಸಕರ ಬೆಂಬಲವಿಲ್ಲದೆ ಯಾರೂ ಸಿಎಂ ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಸಿಎಂ ಅಥವಾ ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿದ್ಧರಾಮಯ್ಯ, “ನಾನು ಅಂತಹ ವಿಷಯಗಳಿಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಹೈಕಮಾಂಡ್ ಎಂದರೆ ಹೈಕಮಾಂಡ್. ಶಾಸಕರು ಮತ್ತು ಹೈಕಮಾಂಡ್ ಎರಡೂ ಬಹಳ ಮುಖ್ಯ. ಶಾಸಕರ ಅಭಿಪ್ರಾಯವಿಲ್ಲದೇ ಯಾರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಶಾಸಕರ ಬಹುಮತ ಇದ್ದರೆ ಮಾತ್ರ ಒಬ್ಬರು ಸಿಎಂ ಆಗಬಹುದು ಎಂದು ಡಿಕೆಶಿಗೆ ಟಾಂಗ್ ನೀಡುವ ಮೂಲಕ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸಚಿವ ಸಂಪುಟದಲ್ಲಿ ನವೆಂಬರ್ ನಲ್ಲಿ ಕ್ರಾಂತಿ ಆಗುವ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು ಇದರ ಮಧ್ಯೆ ಸಿಎಂ ಬದಲಾವಣೆ ಕುರಿತು ಕೂಡ ಹಲವು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಸಚಿವರಿಗೆ ಸಿಎಂ ಡಿನ್ನರ್ ಪಾರ್ಟಿ ನೀಡಿದ್ದು ಭಾರೀ ಚರ್ಚೆಗೂ ಕಾರಣವಾಗಿದ್ದು, ಸಚಿವರ ಔತಣ ಕೂಟಕ್ಕೂ ಸಚಿವ ಸಂಪುಟ ಪುನಾರಚನೆಗೂ ಸಂಬAಧವಿಲ್ಲ ಎಂದರು.