ಬೆಂಗಳೂರು,ಅ.14: ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ ಎನ್ನುವ ಸುದ್ದಿಯ ವಿಚಾರವಾಗಿ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಡಿಸೆಂಬರ್ ವೇಳೆಗೆ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ ಎನ್ನುವ ಹೇಳಿಕೆ ನೀಡಿದ್ದಾರೆ. ನಮ್ಮಲ್ಲಿ 7 ರಿಂದ 8 ಹಿರಿಯ ಶಾಸಕರಿದ್ದಾರೆ ಅವರಿಗೂ ಕೂಡ ಅವಕಾಶ ಕೊಡಬೇಕಲ್ವಾ ಎಂದು ಬೆಂಗಳೂರಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಸಹ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಔತಣಕೂಟ ಸಹ ಏರ್ಪಡಿಸಿದ್ದರು.ಹೀಗಾಗಿ ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ಮಹತ್ವ ಪಡೆದುಕೊಂಡಿದೆ.