ಕಾರ್ಕಳ: ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಶ್ರೀ ಭುವನೇಂದ್ರ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ನಡೆದ 2025-26ರಸಾಲಿನ ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು,ವಾಲಿಬಾಲ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು ಪ್ರಥಮ ಹಾಗೂ ಭುವನೇಂದ್ರ ಕಾಲೇಜು ಕಾರ್ಕಳ ದ್ವಿತೀಯ ಸ್ಥಾನ ಗಳಿಸಿವೆ.
ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ತೃತೀಯ ಹಾಗೂ ಸರಕಾರೀ ಪ್ರಥಮ ದರ್ಜೆ ಕಾಲೇಜುಹೆಬ್ರಿ ತಂಡವು ನಾಲ್ಕನೆಯ ಟ್ರೋಫಿಯನ್ನು ಗೆದ್ದುಕೊಂಡಿದೆ.
ಸ್ವರಾಜ್ ವಾಲಿಬಾಲ್ ಫ್ರೆಂಡ್ಸ್ ,ಸ್ವರಾಜ್ ಮೈದಾನ ಕಾರ್ಕಳ ಇದರ ಕ್ರೀಡಾ ಕಾರ್ಯದರ್ಶಿ ರಂಜಿತ್ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಭುವನೇಂದ್ರ ಕಾಲೇಜಿನ ಪ್ರಾಚಾರ್ಯರಾದ ಡಾ.ಮಂಜುನಾಥ ಎ.ಕೋಟ್ಯಾನ್‌ಉಪಸ್ಥಿತರಿದ್ದರು.