ಬೆಂಗಳೂರು, ಅ.21: ದೀಪಾವಳಿ ಪ್ರಯುಕ್ತ ನಾಳೆ ಬಲಿಪಾಡ್ಯದಂದು ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಕಡ್ಡಾಯವಾಗಿ ಮಾಡುವಂತೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.
ಹಿಂದೂ ಧರ್ಮದಲ್ಲಿ ಗೋವನ್ನು ಪೂಜಿಸುವ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ ಮಾಡುವಂತೆ ಸೂಚಿಸಲಾಗಿದ್ದು, ಬೆಳಗ್ಗೆ ಗೋವುಗಳನ್ನು ದೇವಸ್ಥಾನಗಳಿಗೆ ತಂದು ಬಳಿಕ ಸ್ನಾನ ಮಾಡಿಸಿ ಶಾಸ್ತçದ ಪ್ರಕಾರ ಅರಿಶಿಣ, ಕುಂಕುಮ ಹಚ್ಚಿ, ಹೂವುಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ನೀಡಿ ಆರತಿ ಬೆಳಗಿಸಿ ಪೂಜಿಸುವಂತೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.